Uncategorized

ವಿದ್ಯಾರ್ಥಿ ಕಾಣೆ, ಪತ್ತೆಗಾಗಿ ಪೊಲೀಸರ ಮನವಿ

ಹನುಮಂತ ನಾಯಕ ಸಂಪಾದಕ 9739109997

ಲಿಂಗಸುಗೂರು: ಸಮೀಪ ಆನೆಹೊಸೂರು
ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ
ವಸತಿ ನಿಲಯದಲ್ಲಿದ್ದ ಪ್ರದೀಪ್ ತಂದೆ
ಯಮನಪ್ಪ ಎನ್ನುವ 16 ವರ್ಷದ ವಿದ್ಯಾರ್ಥಿ
ಜನವರಿ17 ರಂದು ಶಾಲೆಗೆ ಹೋಗುವುದಾಗಿ
ಹೇಳಿ ಕಾಣೆಯಾಗಿದ್ದು ಈ ಕುರಿತು
ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಆರಕ್ಷಕ ನಿರೀಕ್ಷಕರು
ಮನವಿ ಮಾಡಿದ್ದಾರೆ.
ಚಹರೆ ಗುರುತು : ಅಂದಾಜು 5 ಅಡಿ ಎತ್ತರ, ಉದ್ದನೆ ಮುಖ,
ಕಪ್ಪು ಮೈಬಣ್ಣ, ತೆಳ್ಳನೆ ಮೈಕಟ್ಟು ಹೊಂದಿದ್ದು, ಕಾಣೆಯಾದ
ಸಂದರ್ಭದಲ್ಲಿ ನಾಸಿ ಬಣ್ಣದ, ಶರ್ಟ್ ಕಪ್ಪು ಬಣ್ಣದ ಪ್ಯಾಂಟ್
ಧರಿಸಿರುತ್ತಾನೆ. ಕನ್ನಡ ತ ಭಾಷೆ ಮಾತನಾಡುತ್ತಾನೆ . ಬಾಲಕನ
ಬಗ್ಗೆ ಸುಳಿವು ಸಿಕ್ಕಲ್ಲಿ ಲಿಂಗಸುಗೂರು ಪೊಲೀಸ್‌ ಠಾಣೆಗೆ ಮಾಹಿತಿ
ನೀಡಲು ಸಿಪಿಐ ಹೊಸಕೆರಪ್ಪ. ಕೆ ಮನವಿ ಮಾಡಿದ್ದಾರೆ.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!