Uncategorized
ಮಟ್ಟೂರು; ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

ಹನುಮಂತ ನಾಯಕ ಸಂಪಾದಕ. 9739109997
ಮುದಗಲ್: ಸಮೀಪದ ಮಟ್ಟೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಲಿಂಗಸ್ಗೂರು ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಾಲಕರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನದಲ್ಲಿಗೆಲುವು ಸಾಧಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಮುಖ್ಯಗುರು ಮಾತನಾಡಿ ನಮ್ಮ ಮಟ್ಟೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುವುದು ಮಟ್ಟೂರು ಗ್ರಾಮ ಹೆಮ್ಮೆ ಪಡುವಂತಹ ವಿಷಯವಾಗಿದೆ. ವಿದ್ಯಾರ್ಥಿಗಳು ಹೀಗೆ ಮುಂದುವರಿದು ಬರುವ ಜಿಲ್ಲಾಮಟ್ಟದಲ್ಲಿಯೂ ಅತ್ಯುತ್ತಮ ಪಂದ್ಯಾಟವನ್ನು ಆಡುವ ಮೂಲಕ ಕ್ರೀಡೆಯಲ್ಲಿಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ರಾಜಪ್ಪ, ಪ್ರತಿಮಾ ಸೇರಿದಂತೆ ಇನ್ನಿತರರು ಇದ್ದರು.



