Uncategorized
ಮುದಗಲ್: ಬೈಕಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ₹4 ಲಕ್ಷ ಕಳ್ಳತನ

ಹನುಮಂತ ನಾಯಕ ಸಂಪಾದಕ. 9739109997
ಮುದಗಲ್: ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಿಂದ ಡ್ರಾ ಮಾಡಿಕೊಂಡು ಮಟ್ಟೂರು ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೈಕಿನಲ್ಲಿ ಬರುತ್ತಿದ್ದ ವೇಳೆ ಸುಮಾರು ₹4 ಲಕ್ಷ ಹಣವನ್ನು ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುದಗಲ್ ನಿಂದ ಮಟ್ಟೂರು ಗ್ರಾಮಕ್ಕೆ ಇಂದು ಸಂಜೆ ವೇಳೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದರುನಿಂದ ಬೈಕಿನಲ್ಲಿ ಬಂದ ಕಳ್ಳರು ಸಿನಿಮೀಯ ರೀತಿಯಲ್ಲಿ ನಾಲ್ಕು ಲಕ್ಷ ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಸ್ಥಳಕ್ಕೆ ಸಿಪಿಐ ಹಾಗೂ ಪಿಎಸ್ಐ ವೆಂಕಟೇಶ್ ಮಾಡಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



