Uncategorized

ನಿವೃತ್ತ ತಹಸೀಲ್ದಾರ ಹೂನೂರರವರಿಗೆ ಸೇವಾರತ್ನ ಪ್ರಶಸ್ತಿ

ಹನುಮಂತ ನಾಯಕ ಸಂಪಾದಕ.      973919997

ಲಿಂಗಸೂಗೂರು: ತಾಲೂಕಾ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಅಮರೇಶಪ್ಪ ಹೂನೂರರವರಿಗೆ ಇತ್ತೀಚೆಗೆ ರಾಯಚೂರಿನಲ್ಲಿ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ರಾಯಚೂರಿನ ಕೃಷಿ ವಿವಿಯ ಶ್ರೀ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಕ್ಷರಿ ಅಭಿನಂದನಾ ಸಮಾರಂಭದಲ್ಲಿ ಲಿಂಗಸಗೂರು ತಾಲೂಕಿನ ನಿವೃತ್ತ ನೌಕರರ ಸಂಘದ ತಾಲೂಕಾಧ್ಯಕ್ಷರಾದ ಅಮರೇಶಪ್ಪ ಹೂನೂರು ಮತ್ತು ಅವರ ತಂಡದ ಸೇವೆ ಗುರುತಿಸಿ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಭೀಮಣ್ಣ ನಾಯಕ, ತಾಲೂಕಾ ನೌಕರರ ಸಂಘದ ಅಧ್ಯಕ್ಷರಾದ ಹಾಜಿಬಾಬು ಕಲ್ಯಾಣಿ, ಶರಣಬಸವರಾಜ ನಾಡಗೌಡ, ಯಲ್ಲಪ್ಪ, ಸಿದ್ದರಾಮಪ್ಪ ಕಾಣ್ಣೂರು, ಪಂಪನಗೌಡ ಪಾಟೀಲ್, ಮರಿಯಪ್ಪ, ಹಾಜೀಬಾಬು ಹೊಸಮನಿ,ಮಲ್ಲಾರೆಡ್ಡಿ ಸೇರಿದಂತೆ ಇದ್ದರು .

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!