Uncategorized

ಮುದಗಲ್ ನಲ್ಲಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

ಹನುಮಂತ ನಾಯಕ ಸಂಪಾದಕ.      9739109997

ಮುದಗಲ್ : ಪಟ್ಟಣದ ಲಿಂಗಸ್ಗೂರು ರಸ್ತೆಯಲ್ಲಿ ಇರುವ ಕೆನರಾ ಬ್ಯಾಂಕ್ ನ ಎಟಿಎಂ ನಿಂದ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ನ್ನು ಬದಲಾಯಿಸಿ 54000 ರೂಪಾಯಿಗಳನ್ನು ದೋಚಿ ಪರಾರಿಯಾದ ಪ್ರಕರಣ ನಡೆದಿದೆ. ಹಾಗೂ ಇತ್ತೀಚಿಗೆ ಸಮೀಪದ ರಾಮತ್ನಾಳ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೀಮಪ್ಪ ಪರಸಪ್ಪ ಕನ್ನಾಳ ಎಂಬ ವ್ಯಕ್ತಿ ಹಣ ತೆಗೆದುಕೊಳ್ಳಲು ಎಟಿಎಂಗೆ ತೆರಳಿರುವುದನ್ನೇ ಗಮನಿಸಿದ ಕಳ್ಳ ಹಣ ತೆಗೆದು ಕೊಡುವ ನೆಪದಲ್ಲಿ ಕಾರ್ಡ್ ಬದಲಾಯಿಸಿದ್ದಾನೆ. ನಂತರ ಲಿಂಗಸುಗೂರಿನ ವಿವಿಧೆಡೆ ಎಟಿಎಂ ಬಳಸಿ 54000 ರೂ. ಹಣ ದೋಚಿದ್ದಾರೆ. ಈ ಕುರಿತು ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಾಗೂ ರಾಮತ್ನಾಳ ಗ್ರಾಮದ ಶಂಕ್ರರಗೌಡ ವಿರುಪಣ್ಣ ಇಟಗಿ ಎಂಬುವವರ ಮನೆಯಲ್ಲಿ ಹಾಡುಹಗಲೇ 7 ತೊಲಿ ಬಂಗಾರ 1ಲಕ್ಷ 20 ಸಾವಿರ ನಗದು ಹಣ ದೋಚಿರುವ ಪ್ರಖರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರ ಪೊಲೀಸ್ ವರಿಷ್ಠಾಧಿಕಾರಿ ಹರೀಷ್ ಪೊಲೀಸ್ ಅಧಿಕಾರಿಗಳಿಂದ ಮಹಿತಿ ಪಡೆದು ರಾಮತ್ನಾಳ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ಯ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮುದಗಲ್ ಠಾಣೆ ಪಿ.ಎಸ್.ಐ ವೆಂಕಟೇಶ ಮಾಡಗಿರಿ ಇನ್ನಿತರರು ಇದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
  • .
Back to top button
error: Content is protected !!