Uncategorized

ಮುದಗಲ್ ; ಒಂದೇ ಕೇಂದ್ರದಲ್ಲಿ ದ್ವಿತೀಯ ಪರೀಕ್ಷೆ ಬರೆದ 408 ವಿಧ್ಯಾರ್ಥಿಗಳು

ಹನುಮಂತ ನಾಯಕ ಸಂಪಾದಕ.        9739109997

ಮುದಗಲ್ : ಪಟ್ಟಣದ ಒಂದೇ ಕೇಂದ್ರದಲ್ಲಿ ಶನಿವಾರ ದ್ವೀತಿಯ ಪಿಯುಸಿ ಕನ್ನಡ ಪರೀಕ್ಷೆ ನೆಡೆಸಲಾಯಿತು. ಮುದಗಲ್ ನ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆಯುವ ಮಕ್ಕಳು ಹಾಜರಾದರು. ಒಟ್ಟು ವಿಧ್ಯಾರ್ಥಿಗಳು 417 ಇದ್ದು, ಅದರಲ್ಲಿ 9 ವಿಧ್ಯಾರ್ಥಿಗಳು ಗೈರಾಗಿದ್ದಾರೆ. ಉಳಿದ ಒಟ್ಟು 408 ವಿಧ್ಯಾರ್ಥಿಗಳು ಒಟ್ಟು 14 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಪರೀಕ್ಷೆ ಕೇಂದ್ರದ ಮುಖ್ಯಸ್ಥ ರಮೇಶ ನಾಯಕ ತಿಳಿಸಿದರು. ಈ ವೇಳೆಯಲ್ಲಿ ವಿಕ್ಷಕರಾಗಿ ಪುರಸಭೆ ಮುಖ್ಯಾಧಿಕಾರಿ ಪ್ರವೀಣ್ ಬೋಗರ್ ಹಾಗೂ ಸ್ಥಳೀಯ ಠಾಣೆಯ ಪಿಎಸ್ಐ ವೆಂಕಟೇಶ್ ಮಾಡಗೇರಿ ನೇತೃತ್ವದಲ್ಲಿ ಎಎಸ್ಐ ವೆಂಕಟಪ್ಪ ನಾಯಕ ಸಿಬ್ಬಂದಿಗಳಾದ ಅನೀಲ್ ಸೇರಿದಂತೆ ಇನ್ನಿತರರು ಇದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
  • .
Back to top button
error: Content is protected !!