Uncategorized

ಏ.30ರವರ ಒಳಗೆ ತೆರಿಗೆ ಪಾವತಿಸಿದರೆ ಶೇ 5ರಷ್ಟು ರಿಯಾಯಿತಿ ಅವಕಾಶ ; ಮುಖ್ಯಾಧಿಕಾರಿ ಪ್ರವೀಣ್ ಬೋಗರ್

ಹನುಮಂತ ನಾಯಕ ಸಂಪಾದಕರು.      9739109997

ಮುದಗಲ್: 2026-27ನೇ ಸಾಲಿನಲ್ಲಿ  ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿ ತೆರಿಗೆಯನ್ನು ಏ.30ರ ಒಳಗಾಗಿ ಪಾವತಿಸಿದರೆ ಒಟ್ಟು ಮೊತ್ತದಲ್ಲಿ ಶೇ 5ರಷ್ಟು ರಿಯಾಯಿತಿ ಸಿಗಲಿದೆ ಎಂದು ಮುಖ್ಯಾಧಿಕಾರಿ ಪ್ರವೀಣ್ ಬೋಗರ್ ತಿಳಿಸಿದರು.ಈ ಪುರಸಭೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಏ.30 ಒಳಗೆ ಆಸ್ತಿ ತೆರಿಗೆ ಕಟ್ಟಿದ್ದಲ್ಲಿ ಮಾತ್ರ ರಿಯಾಯಿತಿ ಇರುತ್ತದೆ. ಮೇ ಹಾಗೂ ಜೂನ್ ತಿಂಗಳಲ್ಲಿ ತೆರೆಗೆ ಪಾವತಿಸಿದರೆ ರಿಯಾಯಿತಿ ಇರುವುದಿಲ್ಲ. ಜೂನ್ ನಂತರ ಶೇ 2ರಷ್ಟು ದಂಡ ಶುಲ್ಕ ಸೇರಿಸಿ ಆಸ್ತಿ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ನೀರಿನ ಕರ ಬಾಕಿ ಹಾಗೂ ಅನಧಿಕೃತ ಜೋಡಣೆ ಪಡೆದಿದ್ದು ಕಂಡು ಬಂದರೆ ಸಂಪರ್ಕವನ್ನು ಕಡಿತಗೊಳ್ಳಿಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಾಧಿಕಾರಿಗಳು ಪತ್ರಿಕೆಗೆ ಮಾಹಿತಿ ನೀಡಿದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!