Uncategorized

ಡಿಕೆ ಶಿವಕುಮಾರ್ ಹಾಗೂ ನಟ ಸುದೀಪ್ ಅವರನ್ನು ನೋಡಿ ಕೆಕೆ ಹಾಕಿದ ಜನರು

ಹನುಮಂತ ನಾಯಕ ಸಂಪಾದಕ -9739109997

ಸಿಂಧನೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ನಟ ಕಿಚ್ಚ ಸುದೀಪ್ ಸಿಂಧನೂರಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಜನರು ನೋಡು ನೋಡುತ್ತಿದ್ದಂತೆ ಕೆಕೆ ಹಾಕಿ ಸಂಭ್ರಮ ಪಟ್ಟರು.
ಬಸನಗೌಡ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮೊದಲ ಬಾರಿಗೆ ಸಿಂಧನೂರಿಗೆ ಆಗಮಿಸಿದ ನಟ ಕಿಚ್ಚ ಸುದೀಪ್ ಅವರನ್ನು ನೋಡಲು ಸಾವಿರಾರು ಮಂದಿ ಆಗಮಿಸಿದ್ದರು ಇದೇ ವೇಳೆ ಕಿಚ್ಚ ಕಿಚ್ಚ ಎಂದು ದೊಡ್ಡ ಧ್ವನಿಯಿಂದ ಕೆಕೆಹಾಕಿ ಸಂಭ್ರಮಿಸಿದರು.
ಕಿಚ್ಚ ಸುದೀಪ್ ರನ್ನು ಅದ್ದೂರಿ ಮೆರವಣಿಗೆ : ಮೊದಲ ಬಾರಿ ಸಿಂಧನೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಚಿತ್ತ ನಟ ಕಿಚ್ಚ ಸುದೀಪ್ ಅವರನ್ನು ಮಹಾತ್ಮ ಗಾಂಧಿ ವೃತ್ತದಿಂದ ತಾಲೂಕು ಕ್ರೀಡಾಂಗಣದವರಿಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಮೆರವಣಿಗೆ ನಡೆಸಿದರು.
ಇದೇ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಸುದೀಪ್ ಮಾತನಾಡಿ ಪ್ರತಿಯೊಬ್ಬರು ಕನ್ನಡದ ಬಗ್ಗೆ ಗೌರವ ಇಡಬೇಕು ಕನ್ನಡ ಚಿತ್ರಗಳನ್ನು ಹೆಚ್ಚು ಹೆಚ್ಚು ನೋಡಬೇಕು ಆಗ ಮಾತ್ರ ಕನ್ನಡ ಸಿನಿಮಾಗಳು ಬೆಳೆಯಲು ಸಾಧ್ಯವಾಗುತ್ತದೆ ಅಭಿಮಾನಿಗಳೇ ನಮ್ಮ ಮನೆಯ ದೇವರುಗಳು ಪ್ರತಿಯೊಬ್ಬರು ಸರಳತೆಯಿಂದ ಜೀವನ ಸಾಗಿಸಬೇಕು, ನವ ವಧು ವರರು ಜೀವನದಲ್ಲಿ ಬರುವ ಕಷ್ಟ ಸುಖವನ್ನು ಸಮಾನವಾಗಿ ಸ್ವೀಕರಿಸಿ ಜೀವನ ಸಾಗಿಸಬೇಕು ಎಂದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!