Uncategorized

ಬಾಗಲವಾಡ ದಿಂದ ಮಾನ್ವಿ ಗೆ ತೆರಳುವ ಮುಖ್ಯ ರಸ್ತೆ ಕಾದಿದೆ ಅಪಾಯಕಾರಿ ಹಳ್ಳದ ಸೇತುವೆ

ಹನುಮಂತ ನಾಯಕ ಸಂಪಾದಕ.      9739109997

ಸಿರವಾರ:: ಸಿರವಾರ ತಾಲೂಕಿನ ಸಮೀಪದ ಬಾಗಲವಾಡ ಗ್ರಾಮದ ಪಕ್ಕದಲ್ಲಿ ಇರುವ ಹಳ್ಳದ ಸೇತುವೆ ಸಂಪೂರ್ಣವಾಗಿ ಶಿಥಿಲಗೊಂಡಿದ್ದು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕವಿತಾಳದಿಂದ ಮಾನ್ವಿ ಸಂಪರ್ಕಿಸುವ ಮುಖ್ಯ ರಸ್ತೆಗೆ ಅಡ್ಡ ನಿರ್ಮಿಸಿರುವ ಹಳದ ಸೇತುವೆ ಯಾವುದೇ ಕ್ಷಣದಲ್ಲಾದರೂ ಕುಸಿಯುವ ಭೀತಿ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತೆ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಲಿಂಗಯ್ಯ ನಾಯಕ ಸೈದಾಪುರ ಹೇಳಿದರು

ಸೇತುವೆ ನಿರ್ಮಿಸಿ ಎಷ್ಟೋ ವರ್ಷ ಕಳೆದಿದೆ ಅಂದಿನ ವಾಹನ ದಟ್ಟಣೆಗೆ ಅನುಗುಣವಾಗಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ ಇಂದು ಕವಿತಾಳ ಮತ್ತು ಮಾನ್ವಿ ಭಾಗದ ಪ್ರತಿದಿನ ನೂರಾರು ಲಾರಿ, ಬಸ್, ಟ್ರ್ಯಾಕ್ಟರ್, ದ್ವಿಚಕ್ರ ವಾಹನ ಸೇರಿದಂತೆ ಭಾರಿ ವಾಹನಗಳು ಇದರ ಮೇಲೆಯೇ ಸಂಚರಿಸುತ್ತವುದು ಮಳೆಗಾಲದಲ್ಲಿ ಹಳ್ಳ ತುಂಬಿ ಬರುತ್ತದೆ ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಿದೆ ಹಾಗೂ ಕಾಂಕ್ರೀಟ್ ಸಂಪೂರ್ಣವಾಗಿ ಕಿತ್ತುಹೋಗಿದ್ದರು ವರ್ಷಗಳ ಕಳೆದರೂ ಇತ್ತಾ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಬಸವರಾಜ ಮಲ್ಲಟ ನಾಗೇಶ್ ನಾಯಕ ನವಲಕಲ್ ಇನ್ನೂ ಅನೇಕರು ಉಪಸ್ಥಿತರಿದ್ದರು

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!